ಸುಳ್ಯ: ಬೀರಮಂಗಲ ಪರಿಸರದ ಬಾಡಿಗೆ ಮನೆಯಲ್ಲಿ ತನ್ನ ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಗೋಣಿಚೀಲದಲ್ಲಿ ತುಂಬಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಪಶ್ಚಿಮಬಂಗಾಳ ಮೂಲದ ಆರೋಪಿ ಇಮ್ರಾನ್ ಶೇಕ್‌ನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪೊಲೀಸರು ಪಶ್ಚಿಮ ಬಂಗಾಳಕ್ಕೆ ತೆರಳಿ ಆರೋಪಿ ಇರುವ ಸ್ಥಳವನ್ನು ಪತ್ತೆ ಬಂಧಿಸಿ ಕರೆತಂದಿದ್ದರು. ಬಳಿಕ ಆತನನ್ನು ವಿಚಾರಣೆ ನಡೆಸಿದಾಗ ತಾನು ಕೊಲೆ ಮಾಡಿದ ದಿನವೇ ಬಸ್ಸಿನಲ್ಲಿ ರಾತ್ರಿ 10ಕ್ಕೆ ಬೆಂಗಳೂರಿಗೆ ತೆರಳಿ ಮಾರನೇ ದಿನ ಪಶ್ಚಿಮಬಂಗಾಳಕ್ಕೆ ಹೋಗುವ ರೈಲಿನಲ್ಲಿ ತೆರಳಿದ್ದ ಎನ್ನುವ ಸಂಗತಿ ತಿಳಿಸಿದ್ದ ಎನ್ನಲಾಗಿದೆ.
ಪೊಲೀಸರು ಆರೋಪಿಯನ್ನು ಡಿ. 1 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಡಿ. 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.


























