ಬೆಳ್ತಂಗಡಿ: ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ ಆಂಬ್ಯುಲೆನ್ಸ್ ಬೆಳ್ತಂಗಡಿ ಸೇತುವೆ ಬಳಿ ನಿಯಂತ್ರಣ ತಪ್ಪಿ ಸೇತುವೆ ಬದಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಡಿ.4ರ ರಾತ್ರಿ ನಡೆದಿದೆ.
ಅಪಘಾತದಿಂದಾಗಿ ಆಂಬ್ಯುಲೆನ್ಸ್ ನಲ್ಲಿದ್ದ ಓರ್ವ ವೈದ್ಯ ಸೇರಿ ಮೂವರಿಗೆ ಗಾಯಗಳಾಗಿವೆ. ಡಾ.ನಿತಿನ್ ರವರಿಗೆ ತಲೆಗೆ ಗಾಯ ಹಾಗೂ ಕೈ ಮೂಳೆ ಮುರಿತಕ್ಕೊಳಗಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳಾದ ಇನ್ನಿಬ್ಬರು ಆಸ್ಪತ್ರೆಯ ಕ್ಷ ಕಿರಣ ತಜ್ಞ ರಿತೇಶ್ (24) ಮತ್ತು ಲ್ಯಾಬ್ ಟೆಕ್ನಿಷಿಯನ್ ಹುಝೈರ್ (23) ಎಂದು ಗುರುತಿಸಲಾಗಿದ್ದು, ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಂಬ್ಯುಲೆನ್ಸ್ ನಲ್ಲಿ ರೋಗಿಗಳು ಇರಲಿಲ್ಲ, ಇವರು ಮೆಡಿಸಿನ್ ಪಾರ್ಸೆಲ್ ವಿಚಾರವಾಗಿ ವಾಹನದಲ್ಲಿ ಬೆಳ್ತಂಗಡಿಗೆ ಬಂದಿದ್ದರು ಎಂದು ತಿಳಿದು ಬಂದಿದೆ.
ಅಪಘಾತದಿಂದ ಆಂಬ್ಯುಲೆನ್ಸ್ ವಾಹನ ಬಹುತೇಕ ನುಜ್ಜುಗುಜ್ಜಾಗಿದೆ..