ಪುತ್ತೂರು: ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ರವರ ಆದೇಶದ ಮೇರೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಿಗೆ ಸಮಯಕ್ಕೆ ಸರಿಯಾಗಿ ಸಂಬಳ ನೀಡದೆ ವಿಳಂಬ ಮಾಡುತ್ತಿರುವ ಅಧಿಕಾರಿಗಳ ಮತ್ತು ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳುವಂತೆ ಹಿರಿಯ ಕಾರ್ಮಿಕ ನಿರೀಕ್ಷಕರಾದ ಗಣಪತಿ ಹೆಗಡೆ ರವರಿಗೆ ಮನವಿ ಸಲ್ಲಿಸಲಾಯಿತು.

ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯಚರಿಸುತ್ತಿರುವ ಇಂದಿರಾ ಕ್ಯಾಂಟೀನ್ ನ ಉಪಯೋಗವನ್ನು ಪ್ರತಿದಿನ ನೂರಾರು ವಿದ್ಯಾರ್ಥಿಗಳು, ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು, ಬಡ ಕೂಲಿ ಕಾರ್ಮಿಕರು, ಆಟೋ ಚಾಲಕರು ಪಡೆಯುತ್ತಿದ್ದಾರೆ. ಆದರೆ ಸಮಯಕ್ಕೆ ಸಿಬ್ಬಂದಿಗಳಿಗೆ ಸಂಬಳ ನೀಡದೇ ಇರುವ ಕಾರಣ ಸರಿಯಾಗಿ ಕೆಲಸಗಳನ್ನು ನಿರ್ವಹಿಸಲು ಅಸಾಧ್ಯವಾಗುತ್ತಿದೆ. ಬಡ ವಿದ್ಯಾರ್ಥಿಗಳ, ಕೂಲಿ ಕಾರ್ಮಿಕರ ಹಿತ ಕಾಪಾಡುವ ದೃಷ್ಟಿಯಿಂದ ಸಂಬಳ ವಿಳಂಬ ಮಾಡುತ್ತಿರುವ ಅಧಿಕಾರಿಗಳ ಮತ್ತು ಗುತ್ತಿಗೆದಾರರ ಮೇಲೆ ಕಾನೂನು ಕ್ರಮ ಕೈಗೊಂಡು ಇಂದಿರಾ ಕ್ಯಾಂಟೀನ್ ನ ಕಾರ್ಯ ಚಟುವಟಿಕೆಗಳು ಸುಸೂತ್ರವಾಗಿ ನಡೆಯಲು ಸಹಕರಿಸುವಂತೆ ಹಾಗೂ ವಿಳಂಬ ಸಂಬಳ ನೀತಿ ಮುಂದುವರಿದರೆ ಕಾರ್ಮಿಕ ಇಲಾಖೆಯ ಮತ್ತು ಇಂದಿರಾ ಕ್ಯಾಂಟಿನ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜ ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಶರೋನ್ ಸಿಕ್ವೇರಾ ಹಾಗೂ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಮ್ ಡಿಸೋಜ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತಾರು, ಪುತ್ತೂರು ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಅಧ್ಯಕ್ಷ ಸನತ್ ರೈ ಎಲ್ನಾಡ್ ಗುತ್ತು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ವಿಶ್ವಜಿತ್, ಪುತ್ತೂರು ಬ್ಲಾಕ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಕೇಶವ್ ಪಡೀಲ್ ಮುಂತಾದವರು ಉಪಸ್ಥಿತರಿದ್ದರು..



























