ಬಂಟ್ವಾಳ: ಲಾರಿಯಡಿಗೆ ಬಿದ್ದು ಮಹಿಳೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮೊಡಂಕಾಪು ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉಷಾ (32) ಮೃತಪಟ್ಟ ಮಹಿಳೆ.
ಉಷಾ ರವರು ಮೊಡಂಕಾಪು ತೆಂಗಿನ ಎಣ್ಣೆ ಮಿಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಮಹಿಳೆಯ ಮೈ ಮೇಲೆ ಲಾರಿ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ..


























