ಪುತ್ತೂರು: ಖಾಸಗಿ ಪ್ಯಾರಾಮೆಡಿಕಲ್ ಶಿಕ್ಷಣ ಸಂಸ್ಥೆಯೊಂದರ ಹಿಂದೂ ಮತ್ತು ಮುಸ್ಲಿಂ ವಿದ್ಯಾರ್ಥಿಗಳ ಬರ್ತ್ ಡೇ ಪಾರ್ಟಿಯಲ್ಲಿ ಹಿಂದೂ ವಿದ್ಯಾರ್ಥಿನಿಯರು ಇರುವ ವೀಡಿಯೋ ಟ್ರೋಲ್ ಪೇಜ್ ನಲ್ಲಿ ವೈರಲ್ ಆದ ಹಿನ್ನಲೆ ವಿದ್ಯಾರ್ಥಿನಿಯರು ಪೊಲೀಸರಿಗೆ ದೂರು ನೀಡಿದ್ದಾರೆ ತಿಳಿದು ಬಂದಿದೆ.
ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ವಾರದ ಹಿಂದೆ ಈ ಬರ್ತ್ ಡೇ ಪಾರ್ಟಿ ನಡೆದಿತ್ತು ಎನ್ನಲಾಗಿದೆ.
ಈ ಕುರಿತು ಹಿಂದೂ ಸಂಘಟನೆ ಆಕ್ರೋಶ ವ್ಯಕ್ತಪಡಿಸಿ ಶಿಕ್ಷಣ ಸಂಸ್ಥೆಗೆ ಮಾಹಿತಿ ನೀಡಿದ್ದರು. ಬಳಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಯಿಂದ ಎಚ್ಚರಿಕೆ ನೀಡಲಾಗಿತ್ತು. ಆದರೇ ಬರ್ತಡೇ ಪಾರ್ಟಿಯ ವಿಡಿಯೋ ವೈರಲ್ ಆಗಿರುವ ಹಿನ್ನಲೆ
ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

























