ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಮತ್ತೊಮ್ಮೆ ಬಿಜೆಪಿ ಅಧಿಕಾರದ ಗದ್ದುಗೆ ಏರೋದು ಪಕ್ಕಾ ಆಗಿದೆ. ಈ ಮೂಲಕ ಸತತ 7ನೇ ಬಾರಿಗೆ ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರ ರಚನೆ ಮಾಡಲಿದೆ.
ಇಲ್ಲಿಯವರೆಗಿನ ಫಲಿತಾಂಶದ ಪ್ರಕಾರ, ಬಿಜೆಪಿ ಬರೋಬ್ಬರಿ 157 ಕ್ಷೇತ್ರಗಳಲ್ಲಿ ಮುನ್ನಡೆಯನ್ನ ಕಾಯ್ದುಕೊಂಡಿದೆ. ವಿರೋಧ ಪಕ್ಷ ಕಾಂಗ್ರೆಸ್ ಮತ್ತೆ ಗುಜರಾತ್‌ನಲ್ಲಿ ಸೋಲನ್ನ ಕಂಡಿದ್ದು, ಕೇವಲ 17 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆಯನ್ನ ಸಾಧಿಸಿದೆ.
ಇನ್ನು ಚುನಾವಣಾ ಸಂದರ್ಭದಲ್ಲಿ ಭಾರೀ ಸದ್ದು ಮಾಡಿದ್ದ ಆಮ್ ಆದ್ಮಿ ಪಕ್ಷವು ಕೇವಲ ಐದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ.
ಅದೇ ರೀತಿ ಇತರೆ ಅಭ್ಯರ್ಥಿಗಳು ಮೂರು ಕ್ಷೇತ್ರಗಳಲ್ಲಿ ಮುನ್ನಡೆಯನ್ನ ಸಾಧಿಸಿದ್ದಾರೆ. ವಿಶೇಷ ಅಂದರೆ ಕಳೆದ ಬಾರಿಯ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಹೆಚ್ಚುವರಿಯಾಗಿ 58 ಕ್ಷೇತ್ರಗಳಲ್ಲಿ ಮುನ್ನಡೆಯನ್ನ ಕಾಯ್ದುಕೊಂಡಿದೆ. ಜೊತೆಗೆ ಕಾಂಗ್ರೆಸ್ ತನ್ನ 60 ಕ್ಷೇತ್ರಗಳನ್ನ ಕಳೆದುಕೊಂಡಿದೆ..


























