ಮಂಗಳೂರು: ಬುರ್ಕಾ ಧರಿಸಿ ನೃತ್ಯ ಮಾಡಿದ ನಾಲ್ವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿರುವ ಘಟನೆ ಮಂಗಳೂರಿನ ವಾಮಂಜೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.

ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ವಿದ್ಯಾರ್ಥಿ ಘಟಕ ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ನೃತ್ಯ ಮಾಡಿದ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ನೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪ್ರಾಂಶುಪಾಲರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ..


























