ಮುಂಬೈ: ಶಾಲಾ ಪ್ರವಾಸಕ್ಕೆ ಹೋಗಿ ವಾಪಾಸ್ ಆಗುತ್ತಿದ್ದ ವೇಳೆ ರಸ್ತೆ ಮಧ್ಯೆಯೇ ಬಸ್ ಉರುಳಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ರಾಯಗಡ ಜಿಲ್ಲೆಯ ಖೋಪೋಲಿಯಲ್ಲಿ ಭಾನುವಾರ ಸಂಜೆ ನಡೆದಿದೆ.

ತರಬೇತಿ ಸಂಸ್ಥೆಯ 10ನೇ ತರಗತಿಯ ಇಬ್ಬರು ಶಿಕ್ಷಕರು ಸೇರಿ ಒಟ್ಟು 50 ಮಂದಿ ಮುಂಬೈನ ಚೆಂಬೂರ್ ನಿಂದ ಪ್ರವಾಸಕ್ಕೆ ಹೊರಟಿದ್ದರು.
ಪ್ರವಾಸಿಗರು ಹಿಂತಿರುಗಿ ಬರುತ್ತಿದ್ದ ವೇಳೆ ರಾತ್ರಿ ಹಳೆಯ ಪುಣೆ – ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿ ಆಗಿದೆ.
ಘಟನೆಯಿಂದಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಉಳಿದವರ ಕೈ, ತಲೆಯ ಭಾಗಕ್ಕೆ ಏಟು ಬಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯವನ್ನು ಮಾಡಿದ್ದಾರೆ ಎಂದು ವರದಿಯಾಗಿದೆ..



























