ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾಗಿ ಹೊಂಡಕ್ಕೆ ಬಿದ್ದ ಘಟನೆ ಕೇಪು ಮೈರ ತಿರುವಿನಲ್ಲಿ ನಡೆದಿದೆ.
ಕೇಪು ಮೈರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾಗಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದ್ದು, ವಾಹನ ಚಾಲಕ ನವೀನ್ ಕುದ್ದುಪದವು ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನೆಯಿಂದಾಗಿ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದೆ..




























