ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅಬ್ಬು ನವಗ್ರಾಮ ಹುಸೈನ್ ರನ್ನು ನೇಮಕ ಮಾಡಲಾಗಿದೆ.

ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಬಂಟಿ ಶಿಲ್ಕೆ ಹಾಗೂ ಮಾಹಿನ್ ರಾಜಸ್ಥಾನ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್, ಬ್ಲಾಕ್ ವಕ್ತಾರ ರಮಾನಾಥ್ ವಿಟ್ಲ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ಅಶ್ರಫ್ ವಿ ಕೆ ಎಂ, ವಿ ಅಬ್ದುಲ್ ರಹಿಮಾನ್(ಹಸೈನಾರ್ ನೆಲ್ಲಿಗುಡ್ಡೆ) ಯುವ ಕಾಂಗ್ರೆಸ್ ಮತ್ತು ಬ್ಲಾಕ್ ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಫಾರೂಕ್ ರವರು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅಬ್ಬು ನವಗ್ರಾಮ ಹುಸೈನ್ ರನ್ನು ನೇಮಿಸಿ ಆದೇಶಿಸಿದ್ದಾರೆ.



























