ಬೆಂಗಳೂರು: ಸಿಎಂ ಬಿಎಸ್ ಯಡಿಯೂರಿಪ್ಪ ಅವರ ಕೊರೊನಾ ವರದಿ ಪಾಸಿಟಿವ್ ಬಂದಿದೆ ಎಂದು ಮುಖ್ಯಮಂತ್ರಿಗಳ ಕಚೇರಿಯಿಂದ ಅಧಿಕೃತ ಮಾಹಿತಿ ಲಭಿಸಿದೆ.
ಬಿಎಸ್‍ವೈ ಅವರು ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಇಂದು ರಾಮಯ್ಯ ಆಸ್ಪತ್ರೆಯಲ್ಲಿ ಜನರಲ್ ಚೆಕಪ್ಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಅವರ ಕೋವಿಡ್ ವರದಿಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತದೆ ಎಂಬ ಮಾಹಿತಿ ಲಭಿಸಿದೆ.
ಸದ್ಯ ಯಡಿಯೂರಿಪ್ಪ ಅವರಿಗೆ ಕೊರೊನಾ ಸೋಂಕು ಹಿನ್ನೆಲೆ ಏಪ್ರಿಲ್ 18ರ ಸಂಜೆ 4 ಗಂಟೆಗೆ ನಿಗದಿಯಾಗಿದ್ದ ಸರ್ವಪಕ್ಷ ಅವರು ಗೈರಾಗುವ ಸಾಧ್ಯತೆ ಇದೆ.