ಬೆಳ್ತಂಗಡಿ: ರಿಕ್ಷಾ ಹಾಗೂ ಸ್ಕೂಟರ್ ನಡುವಿನ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿ ಗ್ರಾಮದಲ್ಲಿ ನಡೆದಿದೆ.
ನಿತ್ಯಾನಂದ ಪೂಜಾರಿ (48) ಮೃತರು.

ಕೊಕ್ರಾಡಿ–ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ನಿತ್ಯಾನಂದ ಪೂಜಾರಿ ಅವರು ಸ್ಕೂಟರ್‌ನಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಆಟೋ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.
ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ನಿತ್ಯಾನಂದ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




























