ಬಂಟ್ವಾಳ: ಟಿಪ್ಪರ್ ಲಾರಿಯೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ವೃದ್ಧ ಮಹಿಳೆ ಗಂಭೀರ ಗಾಯಗೊಂಡು, ಮಗು, ಚಾಲಕ ಸಹಿತ ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಿ.ಸಿರೋಡು ಸಮೀಪದ ಮೊಡಂಕಾಪುವಿನಲ್ಲಿ ನಡೆದಿದೆ.

ರಿಕ್ಷಾವನ್ನು ಅಶ್ರಫ್ ಎಂಬವರು ಚಲಾಯಿಸುತ್ತಿದ್ದು, ರಿಕ್ಷಾ ಪ್ರಯಾಣಿಕರನ್ನು ಕೈಕಂಬ ಕಡೆಯಿಂದ ಮೊಡಂಕಾಪು ಕಡೆಗೆ ಕರೆದೊಯ್ಯುತ್ತಿತ್ತು, ಈ ವೇಳೆ ಮೊಡಂಕಾಪು ಕಡೆಯಿಂದ ಬಂದ ಟಿಪ್ಪರ್ ಲಾರಿ, ಬಸ್ಸೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು, ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.
ಅಪಘಾತದ ತೀವ್ರತೆಗೆ ರಿಕ್ಷಾ ನುಜ್ಜುಗುಜ್ಜಾಗಿದ್ದು, ರಿಕ್ಷಾದಲ್ಲಿದ್ದ ವೃದ್ಧ ಮಹಿಳೆ ಅವ್ವಮ್ಮ(70) ಗಂಭೀರ ಗಾಯಗೊಂಡಿದ್ದು, ಸಂಬಂಧಿಕರಾದ 6 ವರ್ಷದ ಮಗು ಹಾಗೂ ಇನ್ನಿಬ್ಬರು ಮಹಿಳೆಯರಿಗೆ ಹಾಗೂ ರಿಕ್ಷಾ ಚಾಲಕ ಅಶ್ರಫ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಮೆಲ್ಕಾರ್ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ..