ಮಂಗಳೂರು: ಕಾವೂರು ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕಳೆದ ಎರಡು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ಲಮಾಣಿ (38) ರವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ತಮ್ಮ ಊರಾದ ಬಾಗಲಕೋಟೆಗೆ ಹೋಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

2008 ರ ಬ್ಯಾಚ್ ನಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದ ಇವರು ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದವರಾಗಿದ್ದು, ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಹನುಮಂತ ರವರು ಈ ಹಿಂದೆ ಮಂಗಳೂರು ಕಮಿಷನರೆಟ್ ವ್ಯಾಪ್ತಿಯ ಮೂಲ್ಕಿ, ಉತ್ತರ ಸಂಚಾರ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಮೃತರು ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.