ವಿಟ್ಲ: ಕರ್ನಾಟಕ ಬ್ಯಾಂಕ್ ನ 895ನೇ ಶಾಖೆ ಮತ್ತು ಮಿನಿ ಇ-ಲಾಬಿ ಉದ್ಘಾಟನಾ ಸಮಾರಂಭ ಡಿ.16 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿ ನಡೆಯಲಿದೆ.
ನೂತನ ಶಾಖೆಯನ್ನು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ವಿಟ್ಲ ಅರಮನೆಯ ಬಂಗಾರು ಅರಸರು ಉದ್ಘಾಟಿಸಲಿದ್ದಾರೆ.
ಮಿನಿಇ-ಲಾಬಿಯನ್ನು ವಿಟ್ಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ್ ಹೆಚ್.ಇ ರವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕ್ ಜನರಲ್ ಮ್ಯಾನೇಜರ್ ಮಹಾಲಿಂಗೇಶ್ವರ ಕೆ. ರವರು ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..