ಬಂಟ್ವಾಳ: ಅನ್ಯಕೋಮಿನ ಜೋಡಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ಘಟನೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ನಡೆದಿದೆ.

ಭಟ್ಕಳ ಮೂಲದ ಅನ್ಯಕೋಮಿನ ಯುವಕ ಮತ್ತು ಮಂಗಳೂರು ಮೂಲದ ಹಿಂದೂ ಯುವತಿ ಜೊತೆಯಾಗಿ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದು, ಈ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ, ವಿಶ್ವಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರು ಬಸ್ ನಿಲ್ಲಿಸಿ ಅವರಿಬ್ಬರನ್ನು ವಿಚಾರಿಸಿ, ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಮಧ್ಯರಾತ್ರಿಯೂ ಕೂಡ ಹಲವು ಮಂದಿ ಸ್ಥಳದಲ್ಲಿ ಜಮಾಯಿಸಿದ್ದರು.