ಪುತ್ತೂರು: ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.

ಕಾವು ನಿವಾಸಿ ಧರ್ಮಲಿಂಗಮ್ ಎಂಬವರ ಪುತ್ರಿ, ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅನುಶ್ರೀ ಮೃತರು.
ಅನುಶ್ರೀ ರವರಿಗೆ ಕಳೆದ ಮೂರು ದಿನಗಳಿಂದ ಜ್ವರ ಕಾಣಿಸಿದ್ದು, ಪುತ್ತೂರು ಆಸ್ಪತ್ರೆಯಿಂದ ಔಷಧಿ ಪಡೆದಿದ್ದರು.
ನಿನ್ನೆ ರಾತ್ರಿ ವೇಳೆ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಪುತ್ತೂರು ಆಸ್ಪತ್ರೆಗೆ ಕರೆ ತರುವಾಗ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ..