ಮಂಗಳೂರು : ಖ್ಯಾತ ನ್ಯಾಯವಾದಿ ಫಾರೂಕ್ (49) ರವರು ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.

ಫಾರೂಕ್ ರವರು ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾಗಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ರವರ ಕಿರಿಯ ಸಹೋದರರಾಗಿದ್ದಾರೆ.
ಫಾರೂಕ್ ರವರು ಮೂಲತಃ ಮೂಡುಬಿದಿರೆ, ಬೆಳುವಾಯಿಯವರಾಗಿದ್ದು. ಸ್ವಲ್ಪ ಸಮಯ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿದ್ದರು. ಪ್ರಸ್ತುತ ಹೈಕೋರ್ಟ್ ವಕೀಲರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು.
ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದು, ಮೃತದೇಹ ಬೆಳುವಾಯಿಗೆ ತರಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮೃತರು ಪತ್ನಿ, ಪುತ್ರ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.