ಬಂಟ್ವಾಳ: ಕಾರೊಂದು ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ ಸಮೀಪದ ಕೊಡಾಜೆಯಲ್ಲಿ ನಡೆದಿದೆ.

ಗಾಯಗೊಂಡ ಯುವಕನನ್ನು ಕುಂಡಡ್ಕ ನಿವಾಸಿ ಕಿರಣ್ (24) ಎಂದು ಗುರುತಿಸಲಾಗಿದೆ.
ಪುತ್ತೂರಿನಿಂದ ಮಂಗಳೂರು ಕಡೆಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಕೊಡಾಜೆ ಎಂಬಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಗಂಭೀರ ಗಾಯಗೊಂಡ ಸ್ಕೂಟರ್ ಸವಾರನನ್ನು ತುಂಬೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ..