ಬಂಟ್ವಾಳ: ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕರ ಸಹಿತ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡಿನ ನೇತ್ರಾವತಿ ಸೇತುವೆ ಬಳಿ ನಡೆದಿದೆ.

ವಿಟ್ಲ ಕಡೆ ತೆರಳುವ ಖಾಸಗಿ ಸೆಲಿನಾ ಬಸ್ ಮತ್ತು ಸಜೀಪ ರೂಟ್ ನ ಖಾಸಗಿ ಶಾರದಾ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಘಟನೆಯಿಂದಾಗಿ ಬಸ್ ಚಾಲಕರು ಹಾಗೂ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ 8 ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಬಸ್ ಗೆ ಡಿಕ್ಕಿಯಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಈ ಬಗ್ಗೆ ಮೆಲ್ಕಾರ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ..
