ಮೂಲ್ಕಿ : ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಮೂಲ್ಕಿ ಕೆರೆಕಾಡು ಗ್ರಾಮದಲ್ಲಿ ನಡೆದಿದೆ.

ಡಿ.13 ರಂದು ಆರೋಪಿ ಬೈಕ್‌ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು ಅಸಭ್ಯವಾಗಿ ವರ್ತಿಸಿದ್ದಾನೆ. ಈ ಬಗ್ಗೆ ಬಾಲಕಿಯ ತಂದೆಯ ಸ್ನೇಹಿತರಿಬ್ಬರು ಗಮನಿಸಿದ್ದರು. ಶನಿವಾರ ಮತ್ತೆ ಅದೇ ಪ್ರದೇಶದಲ್ಲಿ ಆರೋಪಿ ಕಂಡು ಬಂದ ಹಿನ್ನೆಲೆಯಲ್ಲಿ ಕಟ್ಟಿ ಹಾಕಿ ಹೊಡೆದಿದ್ದಾರೆ.
ಬಾಲಕಿಯ ಪೋಷಕರ ದೂರಿನ ಮೇರೆಗೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಆರೋಪಿಯ ದೂರಿನ ಮೇರೆಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಗಲಭೆ ಪ್ರಕರಣದ ದೂರು ದಾಖಲಾಗಿದೆ.



























