ಸುಳ್ಯ: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ, ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಏ.16 ರಂದು ವ್ಯಕ್ತಿಯೊಬ್ಬರು ಬಸ್ ನಿಲ್ದಾಣದ ಶೌಚಾಲಯದ ಹಿಂಬದಿ ಬಿದ್ದುಕೊಂಡಿರುವುದು ಗಮನಿಸಿದ ಕೆ.ಎಸ್.ಆರ್.ಟಿ.ಸಿ.ಯ ಟಿ.ಸಿ. ಪೋಲೀಸರಿಗೆ ಮಾಹಿತಿ ನೀಡಿದರು. ಪೋಲೀಸರು ಬಂದು ಪರಿಶೀಲಿಸಿದಾಗ ಆ ವ್ಯಕ್ತಿ ಮೃತಪಟ್ಟಿರುವುದು ತಿಳಿದುಬಂದಿದೆ.
ಮೃತದೇಹದ ಬಳಿ ಇದ್ದ ಬ್ಯಾಗ್ ನಲ್ಲಿ ಇದ್ದ ಆಧಾರ್ ಕಾರ್ಡ್ ನ ಆಧಾರದಲ್ಲಿ ಆ ವ್ಯಕ್ತಿ ಮಂಗಳೂರಿನ ಅಚ್ಚುತ ಎಂದು ತಿಳಿದುಬಂದಿದೆ. ಪೋಲೀಸರು ಮೃತದೇಹವನ್ನು ಕೆ.ವಿ.ಜಿ.ಆಸ್ಪತ್ರೆಗೆ ಕೊಂಡೊಯ್ದು ಶೈತ್ಯಾಗಾರದಲ್ಲಿ ಇರಿಸಿದ್ದು ಆ ವ್ಯಕ್ತಿಯ ಸಾವು ಹೇಗೆ ಸಂಭವಿಸಿತೆಂಬುದು ಖಚಿತ ಪಟ್ಟಿಲ್ಲ.