ಮಂಗಳೂರು: ಅಯ್ಯಪ್ಪ ಮಾಲಾಧಾರಿ ಬಾಲಕನಿಗೆ ಹಲ್ಲೆ ನಡೆಸಿದ ಘಟನೆ ಕಪಿತಾನಿಯೋ ಶಾಲೆ ಬಳಿ ನಡೆದಿದೆ ಎಂದು ತಿಳಿದು ಬಂದಿದೆ.

ಬಾಲಕ ಮಾಲೆ ಧರಿಸಿದ್ದಾನೆ ಎಂಬ ಕಾರಣಕ್ಕೆ ಮುಸ್ಲಿಂ ವಿದ್ಯಾರ್ಥಿಗಳು ಆತನಿಗೆ ಹೊಡೆದು ಕೊರಳಿನಲ್ಲಿದ್ದ ಮಾಲೆಯನ್ನು ಕಿತ್ತು ಹಾಕಿದ್ದಾರೆ ಎನ್ನಲಾಗಿದೆ.
ಬಾಲಕ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ..