ಬೆಳ್ತಂಗಡಿ: ಲಾಯಿಲ ಗ್ರಾಮದ ಕೊಯ್ಯೂರು ಕ್ರಾಸ್ ಸಮೀಪ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.20 ರಂದು ಸಂಜೆ ನಡೆದಿದೆ.
ಉಜಿರೆ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸಕ್ಕಿದ್ದ ಬಂಟ್ವಾಳ ತಾಲೂಕಿನ ನಾವೂರು ಮಲೆಬಾವು ನಿವಾಸಿ ವಿಜಯ್ (25) ಮೃತಪಟ್ಟ ಯುವಕ.

ಸಹಸವಾರ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬಾಂಬಿಲ ನಿವಾಸಿ ಶೈಲೇಶ್ (25) ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತ ವಿಜಯ್ ಮತ್ತು ಶೈಲೇಶ್ ಬಂಟ್ವಾಳದ ಮನೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವಿಜಯ್ ಸ್ಥಳದಲ್ಲೇ ಮೃತಪಟ್ಟಿದ್ದು ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.