‘ಕಾಂತಾರ’ ಸಿನಿಮಾ ದೇಶ ವಿದೇಶಗಳಲ್ಲಿ ಸದ್ದು ಮಾಡುತ್ತಿದೆ. ಪಂಜುರ್ಲಿ ದೈವಾರಾಧನೆ ಸಂಸ್ಕೃತಿಯ ಸೊಗಡಿನ ಅದ್ಭುತ ಚಿತ್ರವನ್ನು ಪ್ರೇಕ್ಷಕರು ಬಲುವಾಗಿ ಮೆಚ್ಚಿಕೊಂಡಿದ್ದಾರೆ. ಬಾಲಿವುಡ್ ನಟರೂ ಸಹ ಕಾಂತಾರಕ್ಕೆ ಫಿದಾ ಆಗಿ ಮನಸಾರೆ ಹೊಗಳಿದ್ದಾರೆ. ಈ ಮಧ್ಯೆ ಕಾಂತಾರ ಸಿನಿಮಾವನ್ನು ಆಸ್ಕರ್‌ಗೆ ನಾಮನಿರ್ದೇಶನ ಮಾಡುವಂತೆ ಅರ್ಜಿ ಸಲ್ಲಿಸಿರುವುದಾಗಿ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ತಿಳಿಸಿದೆ.
2023ರ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನ ಮಾಡುವಂತೆ ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾವನ್ನು ಕಳುಹಿಸಲಾಗಿದೆ ಎಂದು ಹೊಂಬಾಳೆ ಫಿಲ್ಮ್ಸ್ ಖಚಿತಪಡಿಸಿದೆ.
ಹೊಂಬಾಳೆ ಪ್ರೊಡಕ್ಷನ್ಸ್ ಸಂಸ್ಥಾಪಕ ವಿಜಯ್ ಕಿರಗಂದೂರ್ ಈ ಬಗ್ಗೆ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ್ದು, ಕೊನೆಯ ಕ್ಷಣದಲ್ಲಿ ಅರ್ಜಿ ಕಳುಹಿಸಿದ್ದು, ನಾಮನಿರ್ದೇಶನಕ್ಕೆ ಪರಿಗಣಿಸುವ ಬಗ್ಗೆ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಕಾಂತಾರ ಕಥೆಯು ಎಷ್ಟು ಬೇರೂರಿದೆ ಎಂದರೆ ಅದು ವಿಶ್ವದಾದ್ಯಂತ ಮಾರ್ಧನಿಸಿದೆ ಎಂದು ಈ ವೇಳೆ ಹೇಳಿಕೊಂಡಿದ್ದಾರೆ..


























