ಪುತ್ತೂರು: ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ನಾಗತಂಬಿಲ ಮತ್ತು ಗ್ರಾಮ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ ಜ.7 ರಂದು ನಡೆಯಲಿದೆ.
ಜ.6 ರಂದು ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ ಮತ್ತು ದುರ್ಗಾನಮಸ್ಕಾರ ಪೂಜೆ ನಡೆಯಲಿದೆ.
ಜ.7 ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಸಾರ್ವಜನಿಕ ಆಶ್ಲೇಷ ಬಲಿ, ಪಂಚಾಮೃತ ಅಭಿಷೇಕ, ಶ್ರೀ ದೈವಗಳ ಸನ್ನಿಧಿಯಲ್ಲಿ ಕಲಶ ತಂಬಿಲ ಪೂಜೆ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ 5 ಗಂಟೆಗೆ ದೈವಗಳ ಭಂಡಾರ ತೆಗೆದು ದೈವಗಳ ನೇಮೋತ್ಸವ ನಡೆಯಲಿದೆ..

























