ಬೆಳ್ತಂಗಡಿ: ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅತಿಥಿಯಾಗಿದ್ದರು. ಕಾರ್ಯಕ್ರಮದ ವೇಳೆ ಕಾಲೇಜು ಆವರಣದಲ್ಲಿ ಮುಸ್ಲಿಂ ವಿದ್ಯಾರ್ಥಿ ಹಾಗೂ ಹಿಂದೂ ವಿದ್ಯಾರ್ಥಿನಿ ಹಗ್ ಮಾಡಿ ಕಿಸ್ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಕಾಲೇಜಿನಿಂದ ಮುಸ್ಲಿಂ ವಿದ್ಯಾರ್ಥಿ, ಹಿಂದೂ ವಿದ್ಯಾರ್ಥಿನಿಯನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಕಾಲೇಜು ಆಡಳಿತ ಮಂಡಳಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಚರ್ಚೆ ಮಾಡುತ್ತಿರುವವರ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದೆ. ಇಬ್ಬರನ್ನೂ ಸಸ್ಪೆಂಡ್ ಮಾಡಿದ್ದಾಗಿ ಆಡಳಿತ ಮಂಡಳಿ ದೂರಿನಲ್ಲಿ ಉಲ್ಲೇಖಿಸಿದೆ..























