ಉಪ್ಪಿನಂಗಡಿ: ಕುದುರೆಯೊಂದಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿ ಸವಾರ ಆಸ್ಪತ್ರೆಗೆ ದಾಖಲಾದ ಘಟನೆ ಪದುಮಲೆ ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಕುದುರೆ ಸವಾರಿ ನಡೆಸುತ್ತಿದ್ದ ಸಚಿನ್ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಕುದುರೆ ಸಾವನ್ನಪ್ಪಿದ್ದು, ಸಚಿನ್ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

























