ಮಂಗಳೂರು: ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಜಲೀಲ್ ಮೃತದೇಹವಿದ್ದ ಆಂಬ್ಯುಲೆನ್ಸ್ ತಡೆದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದು, ಉದ್ರಿಕ್ತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.

ಪ್ರತಿಭಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆರೋಪಿಗಳನ್ನು ಶೀಘ್ರ ಬಂಧಿಸಿ, ಸೂಕ್ತ ಕಾನೂನು ಕ್ರಮಕೈಗೊಳ್ಳುವ ಭರವಸೆ ನೀಡಿದರು.
ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿದ್ದು, ಬಳಿಕ ಶವಯಾತ್ರೆ ಮುಂದುವರಿಯಿತು..
























