ಬಂಟ್ವಾಳ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.

ಬೈಕ್ ಸವಾರ ಮಂಗಳೂರು ನಿವಾಸಿ ಎಂದು ಹೇಳಲಾಗಿದ್ದು, ಹೆಚ್ಚಿನ ವಿವರ ಲಭ್ಯವಾಗಿಲ್ಲ.
ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ..

























