ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ.25 ರಂದು ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಪುರುಷೋತ್ತಮ ಪೂಜಾರಿ(20) ಎಂದು ಗುರುತಿಸಲಾಗಿದೆ.
ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ತರಕಾರಿ ಖಾಲಿ ಮಾಡಿ ವಾಪಸ್ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿಯಾಗಿದೆ.
ಈ ವೇಳೆ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

























