ಉಪ್ಪಿನಂಗಡಿ: ಈಜಲು ತೆರಳಿದ ವೇಳೆ ನದಿಯಲ್ಲಿ ಮುಳುಗಿ ಯುವಕನೋರ್ವ ಕಣ್ಮರೆಯಾದ ಘಟನೆ ಬೆದ್ರೋಡಿ ಎಂಬಲ್ಲಿ ನಡೆದಿದೆ.
ನದಿಯಲ್ಲಿ ಮುಳುಗಿದವರನ್ನು ಜನಾರ್ಧನ್ ಗೌಡ ಎಂದು ಗುರುತಿಸಲಾಗಿದೆ.

ಜನಾರ್ಧನ್ ನದಿಯಲ್ಲಿ ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಮತ್ತು ಅಗ್ನಿಶಾಮಕದಳದವರು ತೆರಳಿದ್ದು, ನಾಪತ್ತೆಯಾದ ಯುವಕನ ಪತ್ತೆ ಕಾರ್ಯ ನಡೆಸುತ್ತಿದ್ದರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹಲವು ಮಂದಿ ಜಮಾಯಿಸಿದ್ದಾರೆ..

























