ಬಂಟ್ವಾಳ: ರೇಷನ್ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನಿಸಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದಲ್ಲಿ ನಡೆದಿದೆ.
ಬಂಟ್ವಾಳ ಉಪ ತಹಶೀಲ್ದಾರ್ ನವೀನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ದಾಸ್ತಾನು ಮಾಡಿದ್ದ 5 ಕ್ವಿಂಟಾಲ್ ರೇಷನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ನೋಟೀಸ್ ಜಾರಿಗೊಳಿಸಿ, ನ್ಯಾಯಬೆಲೆ ಅಂಗಡಿ ಪರವಾನಿಗೆ ರದ್ದು ಮಾಡಲಾಗುವುದು ಅಥವಾ ಹೆಚ್ಚಿನ ಕ್ರಮಕೈಗೊಳ್ಳಲಾಗುವುದು ಎಂದು ಉಪ ತಹಶೀಲ್ದಾರ್ ರವರು ಮಾಹಿತಿ ನೀಡಿದ್ದಾರೆ.
ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರರಿಗೆ ಕೊಡುವ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ಹೆಚ್ಚು ಬೆಲೆಗೆ ಮಾರಾಟ ಮಾಡುವ ಜಾಲ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ..
























