ಮೂಡಬಿದ್ರೆ: ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವರುಗಳಿಗೆ ಅವಮಾನ ಮತ್ತು ಮತಾಂತರಕ್ಕೆ ಯತ್ನ ಮಾಡುತ್ತಿರುವ ಆರೋಪದಡಿ ವ್ಯಕ್ತಿಯೋರ್ವರನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಮೂಡಬಿದ್ರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬೆಂಬಮಿನ್ ಎಂಬ ವ್ಯಕ್ತಿ ಹಿಂದೂ ದೇವರುಗಳಿಗೆ ಅವಮಾನ ಮತ್ತು ಹಿಂದೂಗಳನ್ನು ಪ್ರವಚನದ ಮೂಲಕ ಮತಾಂತರಕ್ಕೆ ಯತ್ನಿಸುತ್ತಿದ್ದರು ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು, ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ…