ವಿಟ್ಲ: ಕೊಡಾಜೆ ಮಸೀದಿ ಬಳಿ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಚಾಲಕ ಮತ್ತು ಸಹಪ್ರಯಾಣಿಕರಿಗೆ ಗಾಯಗೊಂಡ ಘಟನೆ ನಡೆದಿದೆ.

ಮಾಣಿಯಿಂದ ಅನಂತಾಡಿಗೆ ತೆರಳುತ್ತಿದ್ದ ಆಟೋ ರಿಕ್ಷಾ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಆಲ್ಟೊ ಕಾರು ನಡುವೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಆಟೋ ಚಾಲಕ ಕೂಸಪ್ಪ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.