ಉಡುಪಿ: ಗ್ರಾಹಕರಿಗೆ ನೂರಾರು ಕೋಟಿ ರೂ. ವಂಚನೆಯ ಆರೋಪ ಹೊತ್ತಿರುವ ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸೊಸೈಟಿ ಅಧ್ಯಕ್ಷ ಬಿ.ವಿ. ಲಕ್ಷ್ಮೀನಾರಾಯಣ ರನ್ನು ಉಡುಪಿಯ ಸೆನ್ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಬ್ರಹ್ಮಾವರ ಸಮೀಪದ ಮಟಪಾಡಿಯಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಗ್ರಾಹಕರಿಗೆ ನೂರಾರು ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು..