ಬಿಗ್ ಬಾಸ್ ಸೀಸನ್ 9 ಮುಗಿಯಲು ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ವಿನ್ನರ್ ಕಿರೀಟ ಯಾರ ಕೈ ಸೇರಲಿದೆ ಎಂಬುದನ್ನ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.
ದೊಡ್ಮನೆಯ ಆಟಕ್ಕೆ ಬ್ರೇಕ್ ಬೀಳಲು ಕೆಲವೇ ಗಂಟೆಗಳು ಬಾಕಿಯಿದೆ. ಸದ್ಯ ಬಿಗ್ ಬಾಸ್ ಮನೆಯಿಂದ ದಿವ್ಯಾ ಉರುಡುಗ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಈ ಬಾರಿಯೂ ಕೂಡ ದಿವ್ಯಾ ಉರುಡುಗಗೆ ಅದೃಷ್ಟ ಕೈಕೊಟ್ಟಿದೆ.
ಸದ್ಯ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ರೂಪೇಶ್ ರಾಜಣ್ಣ, ದೀಪಿಕಾ ದಾಸ್ ನಡುವೆ ಭರ್ಜರಿ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ರೂಪೇಶ್ ಶೆಟ್ಟಿ ಮತ್ತು ರಾಕೇಶ್ ನಡುವೆ ಸಖತ್ ಫೈಟ್ ಇದೆ.
ಕರಾವಳಿ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ರವರು ಈ ಬಾರಿ ಬಿಗ್ ಬಾಸ್ ಟ್ರೋಫಿ ಗೆಲ್ಲಲಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಹಲವಾರು ಮಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಬಿಗ್ ಬಾಸ್ ಸೀಸನ್ 9ರ ವಿನ್ನರ್ ಯಾರು ಎಂದು ಡಿ.31ರಂದು ಅನೌನ್ಸ್ ಆಗಲಿದ್ದು, ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮೀ ಎಂಬುದನ್ನ ಕಾದುನೋಡಬೇಕಿದೆ…