ಪುತ್ತೂರಿನ ಹೃದಯಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಗತಿಸ್ಟಡಿ ಸೆಂಟರ್ ನಲ್ಲಿ ಹೊಸವರುಷ ವನ್ನು ವಿಶೇಷವಾಗಿ ಆಚರಿಸಲಾಯಿತು.

ಕಾರ್ಯಕ್ರಮ ಸಭಾಧ್ಯಕ್ಷತೆಯನ್ನು ನಾರಾಯಣ ರೈ ಕುಕ್ಕುವಳ್ಳಿ ನಿವೃತ್ತ ಶಿಕ್ಷಕರು, ಲೇಖಕರು, ಸಂಪಾದಕರು ಮಧುಪ್ರಪಂಚ ರವರು ವಹಿಸಿದ್ದರು.
ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಆರಂಭಿಸಲಾಯಿತು. ಸಂಸ್ಥೆಯ ಮುಖ್ಯೋಪಾಧ್ಯಾಯನಿ ಪ್ರಮೀಳಾ ಎನ್.ಡಿ. ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ಹೊಸ ವರುಷವನ್ನು ಹೊಸ ಉಲ್ಲಾಸದಿಂದ ಆಚರಿಸಿ ಎಂದು ಹೊಸ ವರುಷಕ್ಕೆ ಶುಭಹಾರೈಸಿದರು.

ಕಾರ್ಯಕ್ರಮದ ಸಭಾಧ್ಯಕ್ಷರಾದ ನಾರಾಯಣ ರೈ ಕುಕ್ಕುವಳ್ಳಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಗೋಕುಲ್ ನಾಥ್ ರವರು ಮಾತನಾಡಿ, ಹೊಸ ವರುಷವು ಯಾವುದೇ ರೀತಿಯ ಪ್ರಾಕೃತಿಕ ವಿಕೋಪಗಳಿಲ್ಲದೆ ಸುಸೂತ್ರವಾಗಿಸಾಗಲಿ ಎಂದು ಹಾರೈಸಿದರು

ಸಂಸ್ಥೆಯ ಪ್ರಾಂಶುಪಾಲರಾದ ಹೇಮಲತಾ ಗೋಕುಲ್ ನಾಥ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮೇಘ ಗೋಕುಲ್ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವೂ ಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಕ್ಷಯ್, ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೊಸ ವರ್ಷವನ್ನು ವಿದ್ಯಾರ್ಥಿಗಳಿಗೆ “ಸೀಕ್ರೆಟ್ ಸಾಂತ ”ಎಂಬ ಹೊಸ ಆಟದೊಂದಿಗೆ ಉಡುಗೊರೆಯನ್ನು ನೀಡುವ ಮೂಲಕ ಮುಕ್ತಾಯಗೊಳಿಸಲಾಯಿತು

ಅಪೂರ್ವ ಪ್ರಾರ್ಥಿಸಿದರು, ಉಪನ್ಯಾಸಕಿ ಶುಭಲಕ್ಷ್ಮಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಉಪನ್ಯಾಸಕಿ ಸ್ಫೂರ್ತಿ ಸ್ವಾಗತಿಸಿ, ಉಪನ್ಯಾಸಕಿ ಮೇಘಶ್ರೀ ಧನ್ಯವಾದ ಅರ್ಪಿಸಿದರು.



























