ಕಾರ್ಕಳ: ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸದ ಬಸ್ ಮಗುಚಿ ಬಿದ್ದ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪ ಪಾಜೆಗುಡ್ಡೆ ತಿರುವಿನಲ್ಲಿ ನಡೆದಿದೆ.

ಬಸ್ ಮಗುಚಿ ಬಿದ್ದ ಪರಿಣಾಮ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಇಪ್ಪತ್ತು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢಶಾಲೆಗೆ ಸೇರಿದ ಮಕ್ಕಳು ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆಂದು ಧರ್ಮಸ್ಥಳದಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.




























