ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕಲ್ಮಂಜ ಕಜೆ ನಿವಾಸಿ ಸುರೇಶ್ ಅವರ ಪತ್ನಿ, ಸುಂದರಿ(25) ಮೃತ ಮಹಿಳೆ.

ಸುಂದರಿ ರವರು ವಿಷ ಸೇವಿಸಿದ್ದು ಡಿ.27 ರಂದು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ..



























