ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಪ್ರೆಸಿಡೆನ್ಸಿ ಕಾಲೇಜಿನ ಬಿ.ಟೆಕ್ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಾನುಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನೃಪತುಂಗ ರಸ್ತೆಯಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಇ ವಿದ್ಯಾರ್ಥಿ ಪವನ್ ಕಲ್ಯಾಣ್ ಕೊಲೆ ಆರೋಪಿ. ಪ್ರೆಸಿಡೆನ್ಸಿ ಕಾಲೇಜಿನ ಲಯಸ್ಮಿತ (19) ಮೃತ ಯುವತಿ.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದ್ರೆ ಪ್ರೀತಿ ವಿಚಾರಕ್ಕೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ರಾಜಾನುಕುಂಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿ, ಗಾಯಾಳು ವಿದ್ಯಾರ್ಥಿಯನ್ನು ಸ್ಪರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಹ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.
19 ವರ್ಷದ ಲಯಸ್ಮಿತ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಬಿ.ಟೆಕ್ ಓದುತ್ತಿದ್ದಳು. ಅಲ್ಲಿಗೆ ಬಂದಿದ್ದ ಪವನ್ ಕಲ್ಯಾಣ್ ಕ್ಲಾಸ್ ರೂಮಿನಲ್ಲಿದ್ದ ಲಯಸ್ಮಿತಾಗೆ ಹೊರಗೆ ಬರಲು ಹೇಳಿದ್ದಾನೆ. ಆಕೆ ಬಂದ ಕೂಡಲೇ 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾನೆ. ಬಳಿಕ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಸ್ಥಳಕ್ಕಾಗಿಮಿಸಿರುವ ಪೊಲೀಸರು ಪವನ್ ಕಲ್ಯಾಣ್ ಅನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪವನ್ ಕಲ್ಯಾಣ್ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊಲೆ ಆರೋಪಿ ಪವನ್ ಕಲ್ಯಾಣ್, ನೃಪತುಂಗ ರಸ್ತೆಯಲ್ಲಿರೋ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಇ ಪದವಿ ಓದುತ್ತಿದ್ದ.




























