ಬಜ್ಪೆ: ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಏ.19 ರಂದು ನಡೆದಿದೆ. ಏ.19 ರಂದು ಬೆಳಿಗ್ಗೆ ಘಟನೆ ನಡೆದಿದ್ದು, ಎಸಿ ಸ್ಪೋಟ ಇದಕ್ಕೆ ಕಾರಣ ಎನ್ನಲಾಗಿದೆ. ಮೂರು ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಸುತ್ತಿದೆ. ಕಾರ್ಯಾಚರಣೆಗ ಅನುಕೂಲ ಕಲ್ಪಿಸಲು ಚರ್ಚ್ ಬಳಿಯ ರಸ್ತೆಯನ್ನು ಬಂದ್ ಮಾಡಿ, ಪೊಲೀಸ್ ಠಾಣೆ ಹತ್ತಿರ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.