ಮಂಗಳೂರು: ನಾಗುರಿಯಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್.ಐ.ಎ ತಂಡ ನಗರದ ಹೊರವಲಯದ ಶಿಕ್ಷಣ ಸಂಸ್ಥೆಯೊಂದಕ್ಕೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಶಾರೀಖ್ ವಿಚಾರಣೆ ನಡೆಸಿದ ಎನ್.ಐ.ಎ ಅಧಿಕಾರಿಗಳು ಶಿಕ್ಷಣ ಸಂಸ್ಥೆಗೆ ದಾಳಿ ನಡೆಸಿದ್ದಾರೆ.
ಎನ್.ಐ.ಎ ಯಿಂದ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಎಂಬಾತ ಇದೇ ಶಿಕ್ಷಣ ಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿಯನ್ನು ಪಡೆದಿದ್ದನು. ಬೆಂಗಳೂರಿನಿಂದ ಬಂದಿರುವ ಏಳು ಮಂದಿಯ ತಂಡ ತನಿಖೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ..


























