ನವದೆಹಲಿ: ದೇಶದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸಭೆ ಕರೆಯಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಪ್ರಧಾನಿ ಮೋದಿ ಅವರು ತರ್ತು ಸಭೆ ಕರೆದಿದ್ದಾರೆ ಎನ್ನಲಾಗಿದೆ.
ಮಹಾರಾಷ್ಟ್ರ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳ ಕೊರೊನಾ ಪರಿಸ್ಥತಿ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ ಕಠಿಣ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. “ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2.73 ಲಕ್ಷ ಹೊಸ ಕೊರೊನಾ ಪ್ರಕರಣಗಳ ವರದಿಯಾಗಿದೆ. ಸೋಂಕಿಗೆ 1,619 ಮಂದಿ ಮೃತಪಟ್ಟಿದ್ದಾರೆ. 1,44,178 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ” ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.