Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ದೈವಕೋಲದ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು : ‘ಕಾಂತಾರ’ ಸಿನಿಮಾದಂತಿದೆ ಉಡುಪಿಯ ಈ ರಿಯಲ್ ಸ್ಟೋರಿ..!!

January 7, 2023
in ಧಾರ್ಮಿಕ, ರಾಜ್ಯ
0
ದೈವಕೋಲದ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು : ‘ಕಾಂತಾರ’ ಸಿನಿಮಾದಂತಿದೆ ಉಡುಪಿಯ ಈ ರಿಯಲ್ ಸ್ಟೋರಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ: “ಕೋರ್ಟ್​ಗೆ ಹೋಗ್ತಿ, ಆದರೆ ನಿನ್ನ ತೀರ್ಮಾನ ಮೆಟ್ಟಿಲಲ್ಲಿ ನಾನು ಮಾಡುತ್ತೇನೆ” ಎಂದು ಪಂಜುರ್ಲಿ ದೈವ ನುಡಿಯುತ್ತದೆ, ಆದರೂ ಇದನ್ನು ಲೆಕ್ಕಿಸದೆ ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ರಕ್ತಕಾರಿ ಸಾವನ್ನಪ್ಪುತ್ತಾನೆ. ಇದು ಕನ್ನಡದ ಸೂಪರ್ ಹಿಟ್ ಮೂವಿ ‘ಕಾಂತಾರ’ ಸಿನಿಮಾದ ರೀಲ್ ಸ್ಟೋರಿ. ಆದರೇ ಉಡುಪಿಯಲ್ಲಿ ಇದೇ ರೀತಿಯ ರಿಯಲ್ ಸ್ಟೋರಿಯೊಂದು ನಡೆದಿದೆ.

Advertisement
Advertisement
Advertisement

ಉಡುಪಿ ಜಿಲ್ಲೆಯ ಪಡುಬಿದ್ರೆ ತಾಲೂಕಿನ ಪಡುಹಿತ್ಲು ಗ್ರಾಮದಲ್ಲಿ ದೈವಕೋಲದ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿ ದೈವದ ತಂಬಿಲ ಸೇವೆ ಸಂದರ್ಭದಲ್ಲಿ ಸ್ಥಾನದ ಎದುರೇ ಕುಸಿದುಬಿದ್ದು ಸಾವನ್ನಪ್ಪಿದ್ದು, ಊರ ಜನ ಮೂಕವಿಸ್ಮಿತರಾಗಿದ್ದಾರೆ.

ಪಡುಹಿತ್ಲು ಗ್ರಾಮದಲ್ಲಿ ಜಾರಂದಾಯ ಬಂಟ ದೈವಸ್ಥಾನದಲ್ಲಿ ವರ್ಷಕ್ಕೊಮ್ಮೆ ವಿಜೃಂಭಣೆಯ ನೇಮೋತ್ಸವ ನಡೆಯುತ್ತದೆ. ಈ ನೇಮದಲ್ಲಿ ಸಮಸ್ತ ಊರವರು ಭಾಗಿಯಾಗುತ್ತಾರೆ. ಈ ದೈವಸ್ಥಾನ ನೋಡಿಕೊಳ್ಳಲು ಪಡುಹಿತ್ಲು ಜಾರಂದಾಯ ಬಂಟ ಸೇವಾ ಸಮಿತಿ ಇದೆ. ಈ ಸಮಿತಿಯಲ್ಲಿ ಪ್ರಕಾಶ್ ಶೆಟ್ಟಿ ಅಧ್ಯಕ್ಷರಾಗಿದ್ದರು. ಸಮಿತಿ ಬದಲಾದಾಗ ಪ್ರಕಾಶ್ ಶೆಟ್ಟಿ ಸಹಜವಾಗಿ ಅಧಿಕಾರ ಕಳೆದುಕೊಂಡಿದ್ದಾರೆ.

Advertisement
Advertisement

ಅಧಿಕಾರದ ಹಪಹಪಿಯಿಂದ ಪ್ರತ್ಯೇಕ ಟ್ರಸ್ಟ್ ರಚಿಸಿದ ಪ್ರಕಾಶ್ ಶೆಟ್ಟಿ, ಇಲ್ಲಿಯ ಭಂಡಾರ ಮನೆಯ ಗುರಿಕಾರರಾದ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ. ಹೀಗೆ 9 ಜನರ ಟ್ರಸ್ಟ್ ರಚಿಸಿದ ಪ್ರಕಾಶ್ ಶೆಟ್ಟಿ, ಇದರಲ್ಲಿ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸ್ತಾರೆ. ದೈವಸ್ಥಾನ ತಮಗೆ ಸೇರಿದ್ದು ಎಂದು ಹಕ್ಕು ಸ್ಥಾಪಿಸಲು ಯತ್ನಿಸುತ್ತಾರೆ.

ವರ್ಷಂಪ್ರತಿಯಂತೆ ಈ ವರ್ಷ ನೇಮೋತ್ಸವ ನಡೆಸಲು ಜಾರಂದಾಯ ದೈವಸ್ಥಾನ ಸಮಿತಿ ತೀರ್ಮಾನಿಸಿ, ಜನವರಿ 7 ರಂದು ಕೋಲ ನಡೆಸಲು ತೀರ್ಮಾನಿಸುತ್ತದೆ. ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವ ಜಯಪೂಜಾರಿ ಮತ್ತು ಪ್ರಕಾಶ್ ಶೆಟ್ಟಿ‌ ಕೋಲಕ್ಕೆ ತಡೆಯಾಜ್ಞೆ ತರುವಲ್ಲಿ ಯಶಸ್ವಿಯಾಗುತ್ತಾರೆ. ಆಶ್ಚರ್ಯದ ಸಂಗತಿ ಎಂದರೆ ಡಿಸೆಂಬರ್ 23ಕ್ಕೆ ತಡೆಯಾಜ್ಞೆ ತಂದ ಜಯಪೂಜಾರಿ ಡಿಸೆಂಬರ್ 24 ರಂದು ಹಠಾತ್ ಕುಸಿದು ಬಿದ್ದು ಸಾವನ್ನಪ್ಪುತ್ತಾರೆ.

ಸಮೀಪದಲ್ಲಿ ನಡೆಯುತ್ತಿದ್ದ ಕೊಡಮಣಿತ್ತಾಯ ದೈವದ ತಂಬಿಲ ಸೇವೆ ಸಂದರ್ಭ ಎಲ್ಲರೆದುರೇ ಸಾವನ್ನಪ್ಪಿದ್ದು ಊರ ಜನ ಮೂಕವಿಸ್ಮಿತರಾಗಿ ನೋಡುತ್ತಾರೆ. ಈ ಪ್ರಕರಣವನ್ನು ಕೈಗೆತ್ತಿಕೊಂಡ ವಕೀಲ ಬಿ.ನಾಗರಾಜ್, ಕೋರ್ಟ್​ನಲ್ಲಿ ವಾದ ಮಂಡಿಸಿ ತಡೆಯಾಜ್ಞೆಯನ್ನು ತೆರವು ಮಾಡುವಲ್ಲಿ ಯಶಸ್ವಿಯಾಗುತ್ತಾರೆ.

ದೈವ ನರ್ತಕರಿಗೆ ಬೆದರಿಕೆ ಹಾಕಿದ ಪ್ರಕಾಶ್ ಶೆಟ್ಟಿ ಮತ್ತು ತಂಡ..!!

ಟ್ರಸ್ಟಿ ಪ್ರಕಾಶ್ ಶೆಟ್ಟಿ ಕೀಟಲೆ ಕೋರ್ಟ್​ಗೆ ಮಾತ್ರ ಸೀಮಿತವಾಗಿರಲಿಲ್ಲ. ಬೇರೆ ಬೇರೆ ರೀತಿಯಲ್ಲಿ ಕಿರುಕುಳ ನೀಡುತ್ತಾರೆ. ಕೊನೆಗೆ ಜಾರಂದಾಯ ದೈವಸ್ಥಾನದ ದೈವ ನರ್ತಕ ಭಾಸ್ಕರ ಬಂಗೇರ ರನ್ನು‌ ಬೆದರಿಸಿ ತಾವು ಹೇಳುವ ರೀತಿ ದೈವದ ನುಡಿ ಕೊಡಬೇಕು ಎಂದು ಬೆದರಿಸಿತ್ತಾರೆ ಅಂತಾ ದೈವ ನರ್ತಕರು ಆರೋಪ ಮಾಡಿದ್ದಾರೆ.

ಜಾರಂದಾಯ ಅಪ್ಪಣೆಯಂತೆ ದೈವ ನರ್ತಕನಾಗಿ ಕೆಲಸ ಮಾಡುತ್ತಿದ್ದಾಗ ಪ್ರಕಾಶ್ ಶೆಟ್ಟಿ, ಕೇಶವ ಪೂಜಾರಿ ಮತ್ತು ಮೋಹನ್ ಅಮಿನ್ ಅವರು ಹಣದ ಆಮಿಷ ಹಾಕಿ ನಾವು ಹೇಳಿದ ಹಾಗೆ ನುಡಿ ಕೊಡಬೇಕು ಎಂದು ಹೇಳಿ ಬೆದರಿಸಿದ್ದಾರೆ. ನೀನು ಹೇಗೆ ಕೋಲ ಕಟ್ಟುತ್ತೀ ಎಂದು ನನಗೆ ಬೆದರಿಕೆ ಹಾಕಿದ್ದಾರೆ ಎಂದು ದೈವನರ್ತಕ ಭಾಸ್ಕರ ಬಂಗೇರ ಹೇಳಿದ್ದಾರೆ.

ಜನವರಿ 7ಕ್ಕೆ ನಡೆಯಬೇಕಿದ್ದ ನೇಮೋತ್ಸವವನ್ನು ದೈವಸ್ಥಾನ‌ ಸಮಿತಿ‌ ಜಯ ಪೂಜಾರಿ ದೈವದೀನರಾದ ಕಾರಣಕ್ಕೆ ಮುಂದೂಡಿದೆ. ಆದರೆ ಹಠ ಬಿಡದ ಪ್ರಕಾಶ್ ಶೆಟ್ಟಿ ಮತ್ತು ತಂಡ ಜಯ ಪೂಜಾರಿಯವರ ಉತ್ತರಕ್ರಿಯೆಯ ದಿನವಾದ ಜ.7 ರಂದೇ ಕಾಲಾವಧಿ ನೇಮೋತ್ಸವ ಮಾಡಲು ಹೊರಟಿದೆ. ಕೋರ್ಟ್​​ನಲ್ಲಿ ತಡೆಯಾಜ್ಞೆ ತೆರವಾಗಿದ್ದರೂ ಊರವರ ವಿರುದ್ಧ ಹೊರಟಿರುವ ಪ್ರಕಾಶ್ ಶೆಟ್ಟಿ ಮತ್ತು ತಂಡದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೀಗ ಊರ ಸಮಸ್ತರು ಸಭೆ ಸೇರಿ 500 ವರ್ಷಗಳ ಇತಿಹಾಸ ಇರುವ ಜಾರಂದಾಯ ಬಂಟ ಸೇವಾ ಸಮಿತಿ ಮಾಡುವ ನಿರ್ಣಯಕ್ಕೆ ಬದ್ಧ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

ಪಡುಬಿದ್ರೆ ಪೊಲೀಸ್ ಠಾಣೆ ಮೆಟ್ಟಿಲೇರಿದ ದೈವಕೋಲ ವಿವಾದ

ಪಡುಹಿತ್ಲು ಗ್ರಾಮದಲ್ಲಿ ದೈವಕೋಲ ನಡೆಸುವ ವಿವಾದ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದ ಜಯ ಪೂಜಾರಿ ಸಾವು ಹಿನ್ನಲೆ ವಿವಾದವು ಇದೀಗ ಪಡುಬಿದ್ರೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಪೊಲೀಸರ ಸಮ್ಮುಖದಲ್ಲಿ ನಿನ್ನೆ ತಡರಾತ್ರಿವರೆಗೂ ಸಂಧಾನ ಸಭೆ ನಡೆದಿದೆ. ಆದರೆ ಸಂಧಾನ ವಿಫಲವಾಗಿದೆ. ಇಂದು ಕೋಲ ನಡೆಸಲು ಟ್ರಸ್ಟ್ ತೀರ್ಮಾನ ಮಾಡಿದರೆ, ಸಮಿತಿಯು ಕೋಲ ನಡೆಸದಂತೆ ಪಟ್ಟು ಹಿಡಿದಿದೆ.

ದೈವಸ್ಥಾನದ ಸುತ್ತಾಮುತ್ತಾ ಪೊಲೀಸ್ ಬಂದೋಬಸ್ತ್

ಟ್ರಸ್ಟ್ ಮತ್ತು ಸಮಿತಿ ನಡುವಿನ ಜಟಾಪಟಿ ಹಿನ್ನಲೆ ಜಾರಂದಾಯ ದೈವಸ್ಥಾನದ ಸುತ್ತಾಮುತ್ತಾ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಯಾ ಪೂಜಾರಿ ಸಾವಿನ ಸೂತಕ ಹಿನ್ನಲೆ ಕೋಲ ನಡೆಸದಿರಲು ತೀರ್ಮಾನಿಸಲಾಗಿದೆ. ಆದರೆ ಮಾಜಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಕೋಲ ನಡೆಸಲು ಮುಂದಾಗಿದ್ದಾರೆ. ನಿನ್ನೆ ರಾತ್ರಿ ನಡೆದ ಸಂಧಾನಸಭೆಯೂ ವಿಫಲಗೊಂಡ ಪರಿಣಾಮ ಸ್ಥಳದಲ್ಲಿ ಬಿಗಿವಿನ ವಾತಾವರಣ ನಿರ್ಮಾಣಗೊಂಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.

Advertisement
Previous Post

ಮತ್ತೆ ರಿಂಗಣಿಸಿ ಆತಂಕ ಸೃಷ್ಟಿಸಿದ ಸ್ಯಾಟಲೈಟ್ ಫೋನ್ : ಸ್ವರ್ಗ, ಪಾಣಾಜೆ ವ್ಯಾಪ್ತಿಯಲ್ಲಿ ಫೋನ್ ಬಳಕೆ..!!!

Next Post

ಖಾಸಗಿ ಶಾಲೆಗಳ ಶುಲ್ಕ ನಿಗದಿಪಡಿಸೋ ಅಧಿಕಾರ ಸರ್ಕಾರಕ್ಕೆ ಇಲ್ಲ- ಹೈಕೋರ್ಟ್​ ಆದೇಶ

OtherNews

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!
ಧಾರ್ಮಿಕ

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!
ಧಾರ್ಮಿಕ

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!
Featured

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!
ಧಾರ್ಮಿಕ

ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!

February 9, 2026

Leave a Reply Cancel reply

Your email address will not be published. Required fields are marked *

Recent News

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page