ಪುತ್ತೂರು: ಗುತ್ತಿಗಾರು ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸುತ್ತಿರುವ ವೇಳೆ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಹೀಗಾಗಿ ಇಂದು ನಡೆಯುತ್ತಿರುವ ಪ್ರೌಢಶಾಲಾ ಇಂಟರ್ನಲ್ ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ರಜೆ ನೀಡಿದ ಘಟನೆ ವರದಿಯಾಗಿದೆ.
ಮೂವರಿಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಇತರ ವಿದ್ಯಾರ್ಥಿಗಳನ್ನು ಕೂಡಾ ತಪಾಸಣೆಗೊಳಪಡಿಸಲು ನಿರ್ಧರಿಸಲಾಗಿದ್ದು, ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಪ್ರೌಢಶಾಲೆಗೆ ಹೋಗಿದ್ದಾರೆ.