ಮಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ಶನಿವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಇಂದು ಸಂಜೆ ಕಾಸರಗೋಡಿನಲ್ಲಿ ಧೋನಿ ಅವರ ಸ್ನೇಹಿತ ಡಾ. ಶಾಜೀರ್ ಗಫಾರ್ ಅವರ ತಂದೆ ಪ್ರೊ.ಕೆ ಕೆ ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಧೋನಿ ಭಾಗಿಯಾಗಲಿದ್ದಾರೆ.

ಇನ್ನು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದು, ಧೋನಿಯವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು..

























