ಪುತ್ತೂರು: ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.೧೯ ರಂದು ಪಲ್ಲತ್ತಡ್ಕದಲ್ಲಿ ನಡೆದಿದೆ. ಕೆಯ್ಯೂರು ಗ್ರಾಮದ ಪಲ್ಲತ್ತಡ್ಕ ಬೇಡು ಎಂಬವರ ಪುತ್ರ ಚಂದ್ರಶೇಖರ್ (19) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ. ಚಂದ್ರಶೇಖರ್‌ರವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಎ.೧೯ ರಂದು ಮಧ್ಯಾಹ್ನ ಪಲ್ಲತ್ತಡ್ಕದ ಕಾಪುತಡ್ಕ ಎಂಬಲ್ಲಿರುವ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿದೆ. ಬೇಡುರವರು ನೀಡಿದ ದೂರಿನಂತೆ ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.