ಸುಬ್ರಹ್ಮಣ್ಯ : ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಸುಬ್ರಹ್ಮಣ್ಯದ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಭೇಟಿಯಾಗಲು ಬಂದ ಕಲ್ಲುಗುಂಡಿಯ ಹಫೀದ್ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಬಂಧಿತರು.
10-12 ಜನ ಅಪರಿಚಿತರ ತಂಡವು ತನ್ನನ್ನು ಕುಮಾರಧಾರಾ ಬಳಿಯ ಕಟ್ಟಡದಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿತ್ತು ಎಂದು ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದ ಹಫೀದ್ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದ.
ಇದೇ ಘಟನೆಗೆ ಸಂಬಂಧಿಸಿ ವಿದ್ಯಾರ್ಥಿನಿಯ ತಂದೆಯು ಹಫೀದ್ ವಿರುದ್ಧ ಪುತ್ರಿಯ ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ ಬಗ್ಗೆ ದೂರು ನೀಡಿದ್ದರು. ಹಫೀದ್ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ.



























