ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಸುನೀಲ್ ಹತ್ಯೆಗೆ ಯತ್ನಿಸಿದ ಆರೋಪಿ ಸಮೀರ್ನನ್ನು ಸಾಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಮೀರ್ ಬಂಧನಕ್ಕಾಗಿ 3 ವಿಶೇಷ ಪೊಲೀಸ್ ತಂಡ ರಚಿಸಿದ್ದ ಎಸ್ಪಿ ಕಾರ್ಯಾಚರಣೆ ನಡೆಸಿ ತಡರಾತ್ರಿ ಶಿವಮೊಗ್ಗದಲ್ಲಿ ಸಮೀರ್ನನ್ನು ವಶಕ್ಕೆ ಪಡೆದಿದ್ದಾರೆ. ಈ ಕೇಸ್ನಲ್ಲಿ ಈವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಸುನೀಲ್ ಮೇಲೆ ಮಚ್ಚು ಬೀಸಿದ್ದ A1 ಸಮೀರ್ ಹಾಗೂ ಮತ್ತಿಬ್ಬರು ಆರೋಪಿಗಳಾದ ಮನ್ಸೂರ್ ಮತ್ತು ಐಮಾನ್ ನನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇಬ್ಬರ ಪಾತ್ರದ ಬಗ್ಗೆ ಪೊಲೀಸರಿಂದ ತನಿಖೆ ನಡೆಯುತ್ತಿದೆ..



























